38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಆ.12ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಯತೀಶ್ ಕುಮಾರ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಮುಂಡಾಜೆ ಐದಾರು ಸಾವಿರ ಜನ ಸಂಖ್ಯೆ ಹೊಂದಿರುವ ಗ್ರಾಮ ಪಂಚಾಯತ್ ಆದರೆ ಇದುವರೆಗೂ ಘನತ್ಯಾಜ್ಯ ಘಟಕ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಯಾರ ಪ್ರಯತ್ನ ಕಡಿಮೆಯಾಗಿದೆ? ಪವಿತ್ರವಾದ ರುದ್ರಭೂಮಿಯಲ್ಲಿ ತ್ಯಾಜ್ಯಗಳ ರಾಶಿ ಇದೆ. ಜನರು ಮೃತ ದೇಹವನ್ನು ಉಜಿರೆಯ ರುದ್ರಭೂಮಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಗ್ರಾಮ ಪಂಚಾಯತ್ ಈ ಬಗ್ಗೆ ಗಮನ ಹರಿಸಬೇಕು ಎಂದು ಗ್ರಾಮಸ್ಥರಾದ ನಾಮ್ ದೇವ್ ರಾವ್ ಆಗ್ರಹಿಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಲತಾ, ರವಿಚಂದ್ರ, ರಾಮಣ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ, ಜಗದೀಶ್, ವಿಮಲಾ ಎಚ್ ಎಸ್, ಯಶೋಧ, ಜ್ಯೋತಿ, ಅಶ್ವಿನಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಅನುಪಾಲನ ವರದಿ ವಾಚಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ರಂಜಿನಿ ಎಂ ವಂದಿಸಿದರು.

Related posts

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!