25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ನಿಡ್ಲೆ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಆ.11ರಂದು ನಿಡ್ಲೆಯಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ , ಅಧ್ಯಕ್ಷ ಧನಂಜಯ ಗೌಡ ಚಾಲನೆ ನೀಡಿ ನಾವು ಯಾವಾಗಲೂ ಇನ್ನೊಬ್ಬರ ನೆರಳಿನಲ್ಲಿ ಬದುಕದೆ ಸ್ವ – ಉದ್ಯೋಗ ಮಾಡುವುದರ ಮೂಲಕ ನಮ್ಮ ಬದುಕಿಗೆ ನಾವೇ ದಾರಿದೀಪವಾಗಬೇಕು, ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಕನ್ಯಾಡಿ ಸೇವಾಭಾರತಿ, ಕಾರ್ಯದರ್ಶಿ ಬಾಲಕೃಷ್ಣ ಮಾತನಾಡಿ ಮಹಿಳೆಯರು ಸ್ವಂತ ಕೆಲಸವನ್ನು ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತೇವೆ ಎಂಬ ಧೈರ್ಯ ಇದ್ದರೆ ಯಾವುದು ಅಸಾಧ್ಯವಾದ ಮಾತಲ್ಲ ಎಲ್ಲವೂ ಸಾಧ್ಯ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಪೂಜಾರಿ, ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಹೇಮಾವತಿ, ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರಜನಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 32 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಶ್ರೀಮತಿ ಹೇಮಾವತಿ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋ – ಆರ್ಡಿನೇಟರ್ ಸುಮ ನಿರೂಪಿಸಿ, ಶ್ರೀಮತಿ ಸುಮನ ಧನ್ಯವಾದವಿತ್ತರು.

Related posts

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya
error: Content is protected !!