32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ.

ಚಾರ್ಮಾಡಿ ಕಡೆಯಿಂದ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಗುರುವಾಯನಕೆರೆಯಲ್ಲಿ ಮೂರು ವಾಹನಗಳಿಗೆ ತಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನಿಂತಿದ್ದ ಸಂಚಾರಿ ಠಾಣಾ ಪೊಲೀಸರು ತಕ್ಷಣ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಅದರಲ್ಲಿದ್ದ ಮೂವರಲ್ಲಿ ಇಬ್ಬರು ಪರಾರಿಯಾಗಿದ್ದು. ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು,ಹಿಂದೂ ಮುಖಂಡರು ಸೇರಿದ್ದಾರೆ.

ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರಿಗೆ ಎರಡೆರಡು ನಂಬರ್ ಪ್ಲೇಟ್ ಗಳನ್ನು ಅಳವಡಿಸಿ ಅಕ್ರಮವಾಗಿ ಗೋ ಕಳ್ಳತನ ಮಾಡಿ ಸಾಗಾಟ ನಡೆಸಲಾಗುತ್ತಿತ್ತು.ಮೂರು ದನಗಳ ಪೈಕಿ ಎರಡು ದಿನಗಳು ಎದ್ದು ನಿಂತಿದ್ದು ಒಂದು ದನ ನೋವಿನಿಂದ ನರಳುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಸುಬ್ಬಾಪುರ್ ಮಠ ಭೇಟಿ ನೀಡಿದ್ದಾರೆ.

Related posts

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!