September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025 ಭಾರತೀಯ ಸೇನೆ ಹಾಗೂ ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಗೌರವಾರ್ಪಣೆ, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಆ. 15,16 ರಂದು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.

ಆ.15 ರಂದು ಪೂರ್ವಾಹ್ನ ಗಂಟೆ 9:00ಕ್ಕೆ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಗಂಟೆ 2.00ಕ್ಕೆ ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ಕರ್ನಲ್ ನಿತಿನ್ ಭಿಡೆ ಭಾರತೀಯ ಭೂ ಸೇನೆ, ಶ್ರೀಮತಿ ರಾಜೇಶ್ವರಿ ಎಚ್ ಎಚ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು, ರಕ್ಷಿತ್ ಶಿವರಾಂ ಅಧ್ಯಕ್ಷರು, ಬೆಸ್ಟ್‌ ಫೌಂಡೇಶನ್ , ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಶಾಸಕರು, ಬಿ ಅನಂತರಾಜ್ ಜೈನ್‌ ಮಾಸ್ಟರ್ ವಾರೆಂಟ್ ಆಫೀಸರ್ ಭಾರತೀಯ ವಾಯು ಸೇನೆ , ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಲಿದ್ದಾರೆ.

ಆ. 16 ರಂದು ರಕ್ಷಕ ನಮನ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ರವರು ಆಶೀರ್ವಚನ ನೀಡಲಿದ್ದಾರೆ .

ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಿಶ್ರಾಂತ ಶಿಕ್ಷಕರು ಹಾಗೂ ಖ್ಯಾತ ವಾಗ್ಮಿಗಳು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ಮೇಜರ್ ಜನರಲ್ ಎಂ ವಿ ಭಟ್ ಭಾರತೀಯ ಭೂ ಸೇನೆ, ರವಿಶಂಕರ್ ಭಟ್ ಸಮೂಹ ಸಂಪಾದಕರು ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಬೆಂಗಳೂರು, ಕಿಶೋರ್ ಕುಮಾರ್ ಬೊಟ್ಯಾಡಿ ವಿಧಾನ ಪರಿಷತ್ ಶಾಸಕರು, ಬಿ ಎಂ ತಿರುಮಲೇಶ್ ಮುಖ್ಯ ಅಗ್ನಿಶಾಮಕ ಅಧಿಕಾರಿ, ಮಂಗಳೂರು ಭಾಗವಹಿಸಲಿರುವರು.

Related posts

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya
error: Content is protected !!