September 6, 2026
ವರದಿಶಾಲಾ ಕಾಲೇಜು

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಸುಮಾರು 50 ವಿದ್ಯಾರ್ಥಿಗಳಿಗೆ ಒಂದು ಜೊತೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ್ ರಾವ್ ರವರ ವತಿಯಿಂದ ಹೊಸದಾಗಿ ಸೇರ್ಪಡೆಗೊಂಡಂತಹ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿಕೊಂಡಿದ್ದರು.

ಉಚಿತ ಸಮವಸ್ತ್ರವನ್ನು ವಿತರಿಸಿ ಮಾತನಾಡಿದ ಲಕ್ಷ್ಮೀನಾರಾಯಣ್ ರಾವ್ ರವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು, ಕೇವಲ ಕಲಿಕೆಯಲ್ಲಿ ಮಾತ್ರವಲ್ಲದೆ ಪಠ್ಯೇತರ ವಿಷಯಗಳಲ್ಲಿಯೂ ಕೂಡ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮವಾದಂತಹ ಸಾಧನೆಯನ್ನು ಮಾಡುವಂತಾಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಪುಷ್ಪಲತಾ ವಂದಿಸಿದರು. ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!