25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜ್ಯೋತಿ ಎನ್.ಎಸ್.ನೆರವೇರಿಸಿದರು.

ಬಳಿಕ ನಡೆದ ಸಮಾರಂಭದಲ್ಲಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಅವರು , ‘ ಭವ್ಯ ಭಾರತದಲ್ಲಿ ಬದುಕುವುದೇ ನಮ್ಮೆಲ್ಲರ ಪಾಲಿನ ಸೌಭಾಗ್ಯ. ನಮ್ಮ ಪಾರಂಪರಿಕ ಸಂಸ್ಕೃತಿ, ಭಾಷಾ ವೈವಿಧ್ಯತೆಯ ಮಧ್ಯೆ ಶಿಕ್ಷಣ ಹಾಗೂ ಆರ್ಥಿಕತೆಯಲ್ಲಿ ಈ ದೇಶವನ್ನು ಸಂಪದ್ಭರಿತವಾಗಿ ಕಟ್ಟುವ ಕಾರ್ಯದಲ್ಲಿ ಎಲ್ಲರೂ ಶಕ್ತಿ ಮೀರಿ ಪಣ ತೊಡಬೇಕು ‘ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ವಹಿಸಿದ್ದರು

ನಿವೃತ್ತ ಶಿಕ್ಷಕ ಸುರೇಶ್, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ವಿದ್ಯಾರ್ಥಿಗಳಾದ ತೃತೀಯ ಬಿ. ಎ. ವಿದ್ಯಾರ್ಥಿನಿ ಚಂದನಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖುಷಿ, ವಿಜ್ಞಾನ ವಿಭಾಗದ ವಿದ್ಯಾರ್ಥಿ ದೀಪಕ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಿತು

ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸೌಮ್ಯ, ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಬಹುಮಾನಿತರ ಪಟ್ಟಿ ವಾಚಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಷ್ಮಾ ಹಾಗೂ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಸತೀಶ್ ಸಿ ವಂದಿಸಿದರು.

Related posts

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya
error: Content is protected !!