ವರದಿಶಿಕ್ಷಣ ಸಂಸ್ಥೆ

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಅವರು ಧ್ವಜಾರೋಹಣವನ್ನು ನೆರವೇರಿಸಿ, ‘ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಗಳಾದ ಸಾಮರಸ್ಯ, ಕುಟುಂಬ ಪ್ರಬೋಧನ, ಪರಿಸರ ಸಂರಕ್ಷಣೆ, ಸ್ವದೇಶಿ ವಸ್ತುಗಳ ಬಳಕೆ, ನಾಗರಿಕ ಶಿಷ್ಟಾಚಾರದ ಪಾಲನೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕರಾದ ನಾರಾಯಣ ಫಡ್ಕೆ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಮೂರೂ ಶಿಕ್ಷಣ ಸಂಸ್ಥೆಗಳ ವಿಭಾಗದ ಮುಖ್ಯಸ್ಥರು, ಬೋಧಕ – ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಧ್ವಜಾರೋಹಣದ ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

Related posts

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!