ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!