22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಮಹಾವೀರ ಅಜ್ರಿ ರವರು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲಿನಡ್ಕ ಇಲ್ಲಿಯ ನಿವೃತ್ತ ಮುಖ್ಯ ಶಿಕ್ಷಕ ಚಿನ್ನಯ ಗೌಡ, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಗುಂಪಕಲ್ಲು, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ಉಪಸ್ಥಿತರಿದ್ದರು.

ಧ್ವಜಾರೋಹಣ ಕಾರ್ಯಕ್ರಮದ ನಂತರ ನಡೆದಂತಹ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಹಾವೀರ ಅಜ್ರಿ ಯವರು ಸ್ವಾತಂತ್ರ್ಯಕ್ಕಾಗಿ ಬಲಿದಾನವನ್ನು ನೀಡಿದ ರಾಷ್ಟ್ರ ನಾಯಕರ ಬಗ್ಗೆ ಗುಣಗಾನ ಮಾಡಿ, ವಿದ್ಯಾರ್ಥಿಗಳು ಒಂದೊಂದು ರಾಷ್ಟ ನಾಯಕರ ಉತ್ತಮ ಗುಣ ಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿ 79ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು ಕೋರಿದರು.ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯದುಪತಿ ಗೌಡ ಇವರು ತಮ್ಮ ಬಾಲ್ಯದ ದಿನಗಳನ್ನು ನೆನೆದು ಸ್ವತಂತ್ರ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ನಂತರ ಮಾತನಾಡಿದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಚಿನ್ನಯ ಗೌಡರವರು ಬ್ರಿಟಿಷರ ಆಡಳಿತದಲ್ಲಿ ಭಾರತ ಎದುರಿಸಿದಂತಹ ಸಮಸ್ಯೆಗಳ ಬಗ್ಗೆ ಮತ್ತು ನಂತರ ಆದಂತಹ ಸುಧಾರಣೆಗಳ ಬಗ್ಗೆ ತಿಳಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಕೋರಿದರು.ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸೇರಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳಿಗೆ ಊರವರಿಗೆ ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ವತಿಯಿಂದ ಸಿಹಿತಿಂಡಿಯನ್ನು ವಿತರಿಸಲಾಯಿತು. ಪುದುವೆಟ್ಟು ರಿಕ್ಷಾ ಮಾಲಕರು ಮತ್ತು ಚಾಲಕರ ವತಿಯಿಂದ ಸೇರಿರುವ ಎಲ್ಲರಿಗೂ ಸಿಹಿ ತಿಂಡಿಯನ್ನು ನೀಡಲಾಯಿತು. ಮಧ್ಯಾಹ್ನದ ಊಟಕ್ಕೆ ಪುದುವೆಟ್ಟು ದುರ್ಗಾ ಸ್ಟೋರ್ ನ ಸತೀಶ್ ಭಟ್ ರವರು ಪಾಯಸ ದ ವ್ಯವಸ್ಥೆ ಮಾಡಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಪವನ್ ಕುಮಾರ್ ಸ್ವಾಗತಿಸಿ, ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕರಾದ ನಿಶಾಂತ್ ಕುಮಾರ್ ರವರು ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯರಾದ ಶ್ರೀಮತಿ ಪುಷ್ಪಲತಾ ಮತ್ತು ಕುಮಾರಿ ಜಿತೀಕ್ಷರವರು ನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು. ಈ ಒಂದು ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಟ್ಟರು.

Related posts

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya
error: Content is protected !!