37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ ನೆರವೇರಿಸಿ ಶುಭಹಾರೈಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾತಂತ್ರ್ಯದ ಸವಾಲು ಮತ್ತು ಅದನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆಯ ಬಗೆಗೆ ಸಂದೇಶ ನೀಡಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾದ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಶಿಕ್ಷಕ ಕಿರಣ್ ವಾಚಿಸಿದರು.

ವಿದ್ಯಾರ್ಥಿನಿ ತ್ರಿಶಾ ಜೈನ್ ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ವಾತಂತ್ರ್ಯೋತ್ಸವ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳು ರಚಿಸಿದ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಶಿಕ್ಷಕ ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya
error: Content is protected !!