September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೋರವರ ಅಧ್ಯಕ್ಷತೆಯಲ್ಲಿ ಜರಗಿತು.

ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಕರೆಯಿತ್ತರು. ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆ್ಯಂಟನಿ ಫೆರ್ನಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಶಬರಾಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆಯನ್ನಿತ ಹೆರಾಲ್ಡ್ ಪಿಂಟೊ ಹಾಗೂ ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ 6ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2025 ರಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿ ಮೊಹಮ್ಮದ್ ರಯ್ಯಾನ್ ರವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ರಾಷ್ಟ್ರ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಹಶಿಕ್ಷಕ ಗಣೇಶ್ ನಿರೂಪಿಸಿ ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya
error: Content is protected !!