September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತುಳು ಸಂಸ್ಕೃತಿ ಕುರಿತ ಕಾರ್ಯಕ್ರಮ ‘ಆಟಿಡೊಂಜಿ ದಿನ’ ಆ.13ರಂದು ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಅವರು ದೀಪ ಬೆಳಗಿ, ಹಿಂಗಾರ ಅರಳಿಸಿ, ಚೆನ್ನೆಮಣೆ ಆಡುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಆಟಿ ತಿಂಗಳ ಮಹತ್ವ, ತಿಂಡಿ ತಿನಿಸು, ಆರೋಗ್ಯದ ಹಿನ್ನೆಲೆ ಇರುವ ಪದಾರ್ಥಗಳು ಹಾಗೂ ಆಟಿ ಅಮಾವಾಸ್ಯೆ ಬಗ್ಗೆ ತಿಳಿಸಿದರು.

ತುಳು ಭಾಷಾ ಶಿಕ್ಷಕಿ ತ್ರಿವೇಣಿ ಅವರು ಆಟಿ ತಿಂಗಳಿನಲ್ಲಿ ನಡೆಯುವ ದೈವಾರಾಧನೆ, ನಾಗಾರಾಧನೆ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಅವರು ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ತುಳು ಜಾನಪದ ನೃತ್ಯ, ಕವಿತೆ ಮುಂತಾದ ಮನೋರಂಜನೆ ಕಾರ್ಯಕ್ರಮ ನೀಡಿದರು.

ವಿದ್ಯಾರ್ಥಿಗಳಾದ ನಿಶ್ಮಿತ್, ಸ್ವಾಗತಿಸಿ, ರಕ್ಷಿತಾ ವಂದಿಸಿ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!