27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!