September 6, 2026
Uncategorized

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಲೇಜು ಆವರಣದಲ್ಲಿ ಆಚರಿಸಲಾಯಿತು. ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಖ್ಯಾತ ವಕೀಲರು ರೊ. ಬಿ.ಕೆ. ಧನಂಜಯ ರಾವ್ ಅವರು ಮಾತನಾಡಿ, “ನಮ್ಮ ಪೂರ್ವಜರು ತಮ್ಮ ತ್ಯಾಗ ಬಲಿದಾನದಿಂದ ನಮಗೆ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳಿ, ನಮ್ಮ ಮೂಲಭೂತ ಹಕ್ಕುಗಳನ್ನು ಅರಿತುಕೊಳ್ಳುವುದು ಎಷ್ಟು ಮುಖ್ಯವೋ ಅದೇ ರೀತಿ ಈ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ನಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಕೂಡ ಅಷ್ಟೇ ಮುಖ್ಯ. ಪ್ರತಿ ಕಣಕಣದಲ್ಲಿ ಭಾರತೀಯತೆ ರೂಪಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಷ್ಚಂದ್ರ ಶೆಟ್ಟಿಯವರು ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ದೇಶಾಭಿಮಾನ ಬೆಳೆಸಿಕೊಳ್ಳಬೇಕು, ದೇಶಕ್ಕಾಗಿ ತ್ಯಾಗ ಮಾಡುವ ಮನೋಭಾವನೆ ಮೂಡಿದಾಗ ಮಾತ್ರ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಭಾರತೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಪ್ರಾಂಶುಪಾಲರಾದ ಹರೀಶ್ ಕೆ.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕವಾಗಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.

ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ, ಆಡಳಿತ ಮಂಡಳಿಯ ಸದಸ್ಯರಾದ ಕಾಶಿನಾಥ್ ಕಾಂಗಿಣ್ಣಾಯ, ರಾಧಾಕೃಷ್ಣ ರೈ ಹಾಗೂ ಶ್ರೀಮತಿ ರೇಷ್ಮಾ ಸುಭಾಷ್ಚಂದ್ರ ಶೆಟ್ಟಿ , ಶೈಕ್ಷಣಿಕ ನಿರ್ದೇಶಕರಾದ ಪ್ರೊ.ಗಂಗಾಧರ ಇ.ಮಂಡಗಳಲೆ, ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಂಗ್ಲ ಭಾಷಾ ಉಪನ್ಯಾಸಕರದ ಸತೀಶ್ ಬಂಗೇರ ಅತಿಥಿಗಳ ಪರಿಚಯ ಮಾಡಿದರು. ವಿದ್ಯಾರ್ಥಿಗಳಾದ ಸುಮಿತ್ ಶೆಟ್ಟಿ ಮತ್ತು ಕುಮಾರಿ ಚಂದನ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರುದೇಶಭಕ್ತಿ, ಏಕತೆ ಮತ್ತು ಸ್ವಾತಂತ್ರ್ಯದ ಮನೋಭಾವವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

Related posts

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
error: Content is protected !!