25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ನಾಯ್ಕ ರವರು ನೂತನ ಶೌಚಾಲಯದ ಉದ್ಘಾಟನೆಯನ್ನು ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಿರಿಯ ವಿದ್ಯಾರ್ಥಿಗಳು ಊರ ಮಹನೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬಳಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ನಾಯ್ಕ ರವರು ಶುಭವನ್ನು ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾ ಸ್ವಾಗತಿಸಿದರು. ಟಿಜಿಟಿ ಶಿಕ್ಷಕಿ ಶ್ರೀಮತಿ ರಶ್ಮಿ ಬಿ ಯವರು ದಿನಾಚರಣೆಯ ಮಹತ್ವದ ಕುರಿತು ಭಾಷಣ ಮಾಡಿದರು.

ವಿದ್ಯಾರ್ಥಿಗಳಾದ ಫಾತಿಮಾ ಶಾನಿಷ್ಮ, ಸುಂದುಸ್ ಹರ್ಲಿನ್, ಫಾತಿಮಾತ್ ಸ್ವಪ, ರಿದಾರವರು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲೆಗೆ ಸೌಂಡ್ ಸಿಸ್ಟಮ್ ಅನ್ನು ಕೊಡುಗೆಯಾಗಿ ನೀಡಿದ ಅಶ್ರಫ್ ಮತ್ತು ಶ್ರೀಮತಿ ಶೋಭಾ , ನೂತನ ಶೌಚಾಲಯಕ್ಕೆ ಬಾಗಿಲಿನ ವ್ಯವಸ್ಥೆಯನ್ನು ಒದಗಿಸಿಕೊಟ್ಟ ಅಶ್ರಫ್ ಬಾಯ್ತರ್ ರವರಿಗೆ ಗೌರವಾರ್ಪಣೆ ಮಾಡಲಾಯಿತು.

ಶಿಕ್ಷಕಿ ಶ್ರೀಮತಿ ಶಬನ ಬಾನು ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀಮತಿ ವಿನುತಾ ಎಸ್ ಸಾಲಿಯಾನ್ ರವರು ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಶಿಕ್ಷಕಿಯರಾದ ಪದ್ಮಾವತಿ, ರಾಧಾಬಾಯಿ,ವನಿತಾ, ಪೂರ್ಣಿಮಾ,ಲಿಖಿತಾರವರು ಸಹಕರಿಸಿದರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!