25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

ಬೆಳ್ತಂಗಡಿ: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭಗೊಂಡಿದೆ.

ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್‌ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.

ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಬೃಹತ್ ಯಾತ್ರೆ ಕೈಗೊಂಡಿದ್ದು ಒಂದು ವಾರದಿಂದ ಸಿದ್ಧತೆ ನಡೆಸಲಾಗಿದೆ.

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಸಂಜೆ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಲ್ಪ ಮಾಡುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಸಂಕಲ್ಪ ಮಾಡುತ್ತೇವೆ ಎಂದು ವಿಶ್ವನಾಥ್‌ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!