ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮವು ನಡೆಯಿತು.

ಭರತ್ ಯು. ಜಿ ಅರಣ್ಯಾಧಿಕಾರಿ ವೇಣೂರು ಹಾಗೂ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಕಾಲೇಜಿನ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷಗೋಪಾಲ ಶೆಟ್ಟಿ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಇವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾದ ತಿಮ್ಮಪ್ಪ ಮೂಲ್ಯ ಮಾಜಿ ಸೈನಿಕರು ಮಂಗಳೂರು ಇವರು ಈ ಶಾಲೆಯು ಸಂಸ್ಕಾರಕ್ಕೆ ಮಾದರಿಯಾಗಿದೆ, ಇನ್ನು ಮುಂದಕ್ಕೂ ಇದೇ ರೀತಿ ಮುಂದುವರಿಯಲಿ ಎಂದು ಹೇಳಿದರು.ಅದೇ ರೀತಿ ವೇಣೂರಿನ ಅರಣ್ಯಾಧಿಕಾರಿ ಭರತ್ ಯುಜಿ ಇವರು ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಮಕ್ಕಳಿಗೆ ಕಿವಿಮಾತು ನೀಡಿದರು.

ಹರೀಶ್ ಪೊಕ್ಕಿ ಇವರು ಈ ವಿದ್ಯಾ ಸಂಸ್ಥೆಯು ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಇವರು ಮನುಷ್ಯನ ಜೀವನದಲ್ಲಿ ಶಿಸ್ತು ಅತ್ಯಗತ್ಯ .ಈ ಶಾಲೆಯು ಶಿಸ್ತಿಗೆ ಎತ್ತಿದ ಕೈ ಎಂದರು .

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸದಸ್ಯ ವಸಂತ್ ಪಡೀಲ್ , ಪೋಷಕರು , ಕಾಲೇಜಿನ ಪ್ರಾಂಶುಪಾಲರಾದ ಓಮನ ಎಂ ಎ , ಎಲ್ಲಾ ಮುಖ್ಯೋಪಾಧ್ಯಾಯನಿಯರು , ಶಿಕ್ಷಕ ವೃಂದದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ಅಭಿಲಾಷ್ ಮತ್ತು ಪ್ರೌಢಶಾಲಾ ವಿಭಾಗದ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತಾ ನಿರೂಪಿಸಿ , ರಷ್ಯಾದಲ್ಲಿ ಎಂ ಬಿ ಬಿ ಎಸ್ ವ್ಯಾಸಾಂಗ ಮಾಡುತ್ತಿರುವ, ನಮ್ಮ ಶಾಲಾ ಹಿರಿಯ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ವಂದಿಸಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಭೇಟಿ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!