24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!