22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನ್ಯಾಯತರ್ಫು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಕ್ತೇಶ್ವರಿ ಪದವು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೋಟ್ಟು ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೋಟ್ಟು ವಹಿಸಿದ್ದರು .

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ಮೋಹಿನಿ ಬೊಮ್ಮಣ್ಣ ಗೌಡ ಮತ್ತು ಶ್ವೇತಾ
ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಇಂದಿರಾ, ಎಸ್.ಡಿ.ಎಮ್.ಸಿ ಮಾಜಿ ಅಧ್ಯಕ್ಷ ಗಿರಿಯಪ್ಪ ಗೌಡ, ಯಾದವ ಗೌಡ,
ಕವಿತಾ ಶ್ರೀ, ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಎಮ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,
ಅಂಗನವಾಡಿ ಕಾರ್ಯಕರ್ತೆ ಸುನಿತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಪೋಷಕರು ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ದೇಶ ಭಕ್ತಿ ಗೀತೆ ಛದ್ಮವೇಶ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ ಪ್ರಭಾ ಸ್ವಾಗತಿಸಿದರು. ಸಹ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya
error: Content is protected !!