
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ದಂಪತಿ ಹಾಗೂ ಕುಟುಂಬಸ್ಥರು ಭೇಟಿಯಾಗಿ ಆಶೀರ್ವಾದ ಪಡೆದರು.






