September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

ಬೆಳ್ತಂಗಡಿ: ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾತನಾಡಿ 2024ರ ಸಾರ್ವತ್ರಿಕ ಚುನಾವಣೆಗಳಲ್ಲಿ “ಬೃಹತ್​​ ಅಕ್ರಮ” ನಡೆದಿದ್ದು. ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಈ ಅಕ್ರಮಗಳನ್ನು ನಡೆಸಿದೆ.
ಚುನಾವಣಾ ಆಯೋಗವು ಇನ್ನು ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ, ಅದು ಕಾರ್ಯಾಂಗದ ಕೈಗೊಂಬೆಯಾಗಿದೆ” ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷರಾದ ಪ್ರದೀಪ್ ಕೆ ಸಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವುರು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾರಾಯಣ ಗೌಡ, ತಾಲೂಕು ಕೆ ಡಿ ಪಿ ಸದಸ್ಯರಾದ ಸುನಿಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ , ಉಮೈರಾ ಬಾನು, ಕುಶಲಪ್ಪ ಗೌಡ ಶಿರ್ಲಾಲು, ಶ್ರೀಮತಿ ಡಯಾನಾ ಪುದುವೆಟ್ಟು, ಸಂತೋಷ್ ಕೆ.ಸಿ ಪುದುವೆಟ್ಟು, ಕುಶಲಪ್ಪ ಗೌಡ ಕಳೆಂಜ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya
error: Content is protected !!