23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಆ.15 ರಂದು ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ಜರಗಿತು.

ಬೆಳಿಗ್ಗೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ ಭಟ್ ಮಠ ಇವರ ಪೂಜಾ ವೈಧಿಕ-ವಿದಾನಗಳನ್ನು ನಡೆಸಿ ಕಾರ್ಯಕ್ರಮಕ್ಕೆ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ನಂತರ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಮಹನೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಸಾಯಂಕಾಲ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ ಭಾಗವಹಿಸಿದರು. ಧಾರ್ಮಿಕ ಭಾಷಣಗಾರರಾಗಿ ಸರಕಾರಿ ಪ್ರೌಢಶಾಲೆ ಕಕ್ಕಿoಜೆ ಇಲ್ಲಿಯ ಶಿಕ್ಷಕ ಸುರೇಶ್ ಪೂಜಾರಿ ಬಟ್ಟೆಮಾರು ಇವರು ಮಾತನಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಮಾಡುವುದರೊಂದಿಗೆ ಧಾರ್ಮಿಕ ಆಚಾರ ವಿಚಾರ‌ ನಮ್ಮೆಲ್ಲರಲ್ಲಿ ಉಳಿಯಲಿದೆ ಶ್ರೀ ಕೃಷ್ಣನ ಅನುಗ್ರಹದಿಂದ ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ಆರೋಗ್ಯ ಪ್ರಾಪ್ತಿಯಾಗಲಿ ಎಂದರು.

ವೇದಿಕೆಯಲ್ಲಿ ಶ್ರೀರಾಮ ಸೇವಾ ಸಮಿತಿಯ ಗೌರವ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಪ್ರಧಾನ ಕಾರ್ಯದರ್ಶಿ ಪ್ರೀತಂ ಆಚಾರ್ಯ, ಕೋಶಾಧಿಕಾರಿ ಪ್ರದೀಪ್ ಕುಮಾರ್ ನೇರಳಕಟ್ಟೆ, ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ, ವಿನೋದ್ ಶೆಣೈ ಮದ್ದಡ್ಕ ಉಪಸ್ಥಿತರಿದ್ದರು.

ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು ಅನ್ನದಾನ ಸೇವಕರ್ತಕರಾದ‌ ದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಿಶೇಷವಾಗಿ ಮುದ್ದು ಕೃಷ್ಣ ಸ್ಪರ್ಧೆ ನಡೆಸಲಾಯಿತು ಹಾಗೂ ವಿವಿಧ ಆಟೋ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ನೀಡಿದರು. ದೃತಿ ಮದ್ದಡ್ಕ ಇವರ ಪ್ರಾರ್ಥನೆಯನ್ನು ಹಾಡಿದರು. ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿದರು. ಶೈಲೇಶ್ ಭದ್ರಕಜೆ ಧನ್ಯವಾದವಿತ್ತರು.

ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮದ್ದಡ್ಕ ಇದರ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.
✍🏻ವರದಿ: ಮನು ಮದ್ದಡ್ಕ

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya
error: Content is protected !!