25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕವರದಿಸರ್ಕಾರಿ ಇಲಾಖಾ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎಸ್‌ಐಟಿ ನಡೆಸುತ್ತಿರುವ ತನಿಖೆಯನ್ನು ಶೀಘ್ರ ಮುಗಿಸಬೇಕು. ಸತ್ಯಾಸತ್ಯತೆ ಬಹಿರಂಗ ಪಡಿಸಿ. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಅವರು ಆ.17ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್ ಐಟಿ ತನಿಖೆಗೆ ‌‌ನಮ್ಮ ಸ್ವಾಗತವಿದೆ ಆದರೆ ತನಿಖೆ ಹೆಸರಿನಲ್ಲಿ ಧಮ೯ಸ್ಥಳ ಕ್ಷೇತ್ರದ ಬಗ್ಗೆ ಬಹಳಷ್ಟು ಅಪಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಲಾಗಿದೆ. ಇವುಗಳನ್ನು ತಡೆಗಟ್ಟ ಬೇಕು ಎಲ್ಲ ಗೊಂದಲಗಳಿಗೆ ಶೀಘ್ರ ತೆರೆ ಎಳೆಯಬೇಕು, ಸರ್ಕಾರ ತಕ್ಷಣ ಇದಕ್ಕೆ ಸ್ಪಂದಿಸಬೇಕು ಎಂದರು.

ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ನಾಯಕರು, ಸಂಸದರು ಹಾಗೂ ಶಾಸಕರಗಳು ಇದ್ದರು. ಪ್ರಮುಖರಾದ ಛಲವಾದಿ ನಾರಾಯಣ ಸ್ವಾಮಿ ಸಿ . ಟಿ ರವಿ, ಕ್ಯಾ.ಬೃಜೇಶ್ ಚೌಟ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ , ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ , ಎಸ್.ಆರ್ ವಿಶ್ವನಾಥ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ,ಕಿರಣ್ ಕೊಡ್ಗಿ,ಪ್ರತಾಪ್ ಸಿಂಹ ನಾಯಕ್,ಉಮಾನಾಥ್ ಕೋಟ್ಯಾನ್ರವಿಕುಮಾರ್, ಮೈಸೂರು ಎಂ.ಎಲ್.ಎ ಶ್ರೀ ವಾತ್ಸವ ಅಪಾರ ಸಂಖ್ಯೆಯಲ್ಲಿ ಪಕ್ಷದ ನಾಯಕರು ಉಪಸ್ಥಿತರಿದ್ದರು.

ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ;
ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆದಿದ್ದು,
ಬೆಂಗಳೂರಿನಿಂದ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ
ಸುಮಾರು ಎರಡು ಸಾವಿರ ಭಕ್ತರು ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ಆಗಮಿಸಿದ್ದರು.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಈ ಬೃಹತ್ ಯಾತ್ರೆ ಕೈಗೊಂಡಿದ್ದರು.

.

Related posts

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya
error: Content is protected !!