September 6, 2026
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವ‌ರ್ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಕೊಲೆಯಾದ ಅನೇಕ ಯುವತಿ, ಮಹಿಳೆ ಹಾಗೂ ಪುರುಷರ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದಾನೆ.

ಈ ಬಗ್ಗೆ ರಾಜ್ಯದ ಮಹಿಳೆ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆಯುತ್ತಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿತ್ತು. ಎಸ್‌ಐಟಿ ಪ್ರಣಬ್‌ ಮೊಹಂತಿ ಅವರ ನೇತೃತ್ವದಲ್ಲಿ ಅನುಚೇತ್ ಅವರು ಸೇರಿ ತನಿಖೆ ನಡೆಸಿದ್ದಾರೆ. ಸಾಕ್ಷಿದಾರನಿಂದ 161 ಸ್ಟೇಟ್‌ಮೆಂಟ್ ತೆಗೆದುಕೊಂಡು, ಸ್ಥಳಗಳ ಮ್ಯಾಪ್ ಮಾಡಿಕೊಂಡು ಭೂ ಅಗೆತ ಪ್ರಾರಂಭಿಸಿದ್ದಾರೆ. ಭೂಮಿ ಅಗೆಯುವ ಸ್ಥಳ ಪ್ರಾರಂಭ ಮಾಡಿದಾಗ ಎರಡು ಸ್ಥಳಗಳಲ್ಲಿ ಅಸ್ಥಿ ಪಂಜರ ಸಿಕ್ಕಿದೆ. ಆ ಅಸ್ಥಿಪಂಜರವನ್ನು ಹಾಗೂ ಆ ಸ್ಥಳದಲ್ಲಿ ಸಿಕ್ಕ ಕೆಲವು ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ.

ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.ದೂರುದಾರನನ್ನು ಬಂಧಿಸಲು ಸಾಧ್ಯವಿಲ್ಲ:”ಸಾಕ್ಷಿ – ದೂರುದಾರ ಯಾರದೋ ಕಸ್ಟಡಿಯಲ್ಲಿ ಇರುತ್ತಾನೆ. ಏಕೆ ಬಂಧನ ಮಾಡಿಲ್ಲ?’ ಎಂಬ ಪ್ರಶ್ನೆ ಇದೆ. ಆದರೆ ಸಾಕ್ಷಿದಾರರಿಗೆ ಸುರಕ್ಷತೆ ಕೊಡುವ ನಿಟ್ಟಿನಲ್ಲಿ ಕಾಯ್ದೆ ಇದೆ. ಕೇಂದ್ರ ಸರ್ಕಾರದ ಕಾಯ್ದೆ ಅದು. ರಾಜ್ಯ ಸರ್ಕಾರವೂ ಅದನ್ನು ಅಳವಡಿಸಿಕೊಂಡಿದೆ. ಅದನ್ನು ಪಾಲನೆ ಮಾಡುತ್ತಿದ್ದೇವೆ. ಈ ಕಾರಣಕ್ಕೆ ಪೊಲೀಸ್‌ ಭದ್ರತೆಯಲ್ಲಿ ಇಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.

Related posts

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!