22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಗೌಡ ಮತ್ತು ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಲಕ್ಷ್ಮಿಕಾಂತ್ ಕೀಲಾರು, ಹರೀಶ್ ಕೋಡಿಮಜಲು, ನವೀನ್ ಪ್ರಕಾಶ್, ತಿರುಮಲೇಶ್ ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ ಸ್ವಾಗತಿಸಿ , ಹಳೆ ವಿದ್ಯಾರ್ಥಿ ಸಂಘಕ್ಕೆ ಶಾಲೆಯ ಪರವಾಗಿ ಕೃತಜ್ಞತೆಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಹಾಬಲ ಗೌಡ, ಸದಸ್ಯರಾದ ಶ್ರೀನಿವಾಸ ಗೌಡ, ಕವಿತಾ, ಶ್ಯಾಮಲಾ, ಶಶಿಧರ ಗೌಡ ಹಾಗೂ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya
error: Content is protected !!