September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆ. 17ರಂದು ಬರೆಂಗಾಯ ಉನ್ನತೀಕರಿಸಿದ ಹಿ. ಪ್ರಾ. ಶಾಲಾ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಬೆಳಗ್ಗೆ ಮಧುಕರ ರಾವ್ ಮಚ್ಚಳೆ ಉದ್ಘಾಟಿಸಿದರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹೇಮಂತ್ ಗೌಡ ಕಜೆ ವಹಿಸಿದ್ದರು. ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಠೆ ಕಾಟ್ಲ, ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಅಧ್ಯಕ್ಷ ಪುನೀತ್ ಪೊಂರ್ದಿಲ, ಬರೆಂಗಾಯ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ, ಮಧುಕರ ರಾವ್ ಮಚ್ಚಳೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಮಾಜಸೇವಕರಾದ ಸುಂದರ ಗೌಡ ಹಾಗೂ ಮಂಗಳೂರು ವಿಜಯಕುಮಾರ್ ಕೊಡಿಯಲ್ ಬೈಲ್ ಇವರನ್ನು ಸನ್ಮಾನಿಸಲಾಯಿತು.


ಗಾಯತ್ರಿ ಹೆಚ್. ಗೌಡ ಗುತ್ತಿಮಾರು ಪ್ರಾರ್ಥಿಸಿದರು. ಗುಣಶ್ರೀ ಕಜೆ ಸ್ವಾಗತಿಸಿದರು. ಗೀತಾ ಪಿ. ಡಿ. ಕಜೆ ಕಾರ್ಯಕ್ರಮ ನಿರೂಪಿಸಿ, ಆದಿತ್ಯ ಜೆ. ಶೆಟ್ಟಿ ಧನ್ಯವಾದವಿತ್ತರು.

ಶಾಸಕ ಹರೀಶ್ ಪೂಂಜ ಹಾಗೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು, ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಜರಗಿತು.
ಕಾರ್ಯಕ್ರಮದ ಯಶಸ್ವಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಪದಾಧಿಕಾರಿಗಳು, ಸರ್ವ ಸದಸ್ಯರು ಸಹಕರಿಸಿದ್ದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!