September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯ ಖಾವಂದರ ವ್ಯಕ್ತಿತ್ವದ ತೇಜೋವಧೆ ಮತ್ತು ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ನಡೆದ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.


8 ಶತಮಾನಗಳ ಘನ ಪರಂಪರೆಯನ್ನು ಹೊಂದಿರುವ ಜಾತಿ-ಮತ-ಧರ್ಮಗಳ ಭೇದವಿಲ್ಲದೆ ಚತುರ್ಧಾನ ಪರಂಪರೆಯನ್ನು ನಡೆಸಿಕೊಂಡು ಬರುತ್ತಿರುವ ಕೋಟ್ಯಾಂತರ ಜನರ ಶ್ರದ್ಧಾ ಕೇಂದ್ರವಾಗಿರುವ ಪರಮ ಪವಿತ್ರ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುನಾಥ ಸ್ವಾಮಿಯ ಆಶೀರ್ವಾದ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ, ಮಹಿಳಾ ಸಬಲೀಕರಣ, ಸರ್ವಧರ್ಮ ಸಮ್ಮೇಳನಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಜನಜಾಗೃತಿ ವೇದಿಕೆ. ರುಡ್‌ ಸೆಟ್ ಸಂಸ್ಥೆಗಳ ಸಮಾಜಮುಖಿ ಕಾರ್ಯಗಳು ಇಡೀ ದೇಶಕ್ಕೆ ಮಾದರಿಯಾಗಿದೆ.


ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೀಮಿತವಾಗಿರದೆ ದಾನ ಪರಂಪರೆ ಸಾಮಾಜಿಕ ಕಾರ್ಯಗಳನ್ನು ರಾಷ್ಟ್ರ ಮಟ್ಟಕ್ಕೆ ತಮ್ಮ ನಿರಂತರ ಪರಿಶ್ರಮ, ನಿಸ್ವಾರ್ಥ ಸೇವಾಭವ, ಧರ್ಮನಿಷ್ಠೆಯ ಮೂಲಕ ವಿಸ್ತರಿಸಿದವರು ಕ್ಷೇತ್ರದ 21ನೇ ಧರ್ಮಾಧಿಕಾರಿಗಳಾದ ಹೆಗ್ಗಡೆಯವರು. ಇಂತಹ ಪರಮ ಪವಿತ್ರ ಕ್ಷೇತ್ರ ಹಾಗೂ ಹೆಗ್ಗಡೆಯವರ ಶುದ್ಧ ವ್ಯಕ್ತಿತ್ವದ ವಿರುದ್ಧ ತಪ್ಪು ಹಾಗೂ ಅವಹೇಳನಕಾರಿ ಹೇಳಿಕೆಗಳು ನೀಡುತ್ತಿರುವುದು ಅತ್ಯಂತ ಖಂಡನೀಯ ವಿಚಾರ. ಇಂತಹ ತಪ್ಪು ಮಾಹಿತಿ ಹೇಳಿಕೆಗಳು ಸಮಾಜದ ಸ್ವಾಸ್ಥ್ಯ ಹಿಂದೂ ಧಾರ್ಮಿಕ ನಂಬಿಕೆಗಳನ್ನು, ಸಂಸ್ಕೃತಿ ಪರಂಪರೆಗಳನ್ನು ಕೆಡಿಸುತ್ತಿದೆ. ಇಂತಹ ಅಸತ್ಯದ, ಅಧರ್ಮದ ಆರೋಪಗಳನ್ನು ಪ್ರಜ್ಞಾವಂತ ಶಿಕ್ಷಿತ ಸಮಾಜದ ಪ್ರಜೆಗಳಾದ ನಾವು ತೀವ್ರವಾಗಿ ಖಂಡಿಸಬೇಕಾದ ಅನಿವಾರ ಸ್ಥಿತಿಯಲ್ಲಿದ್ದೇವೆ. ಆದ್ದರಿಂದ ನಾವೆಲ್ಲರೂ ಒಗ್ಗಟ್ಟಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ಪರವಾಗಿ ಗಟ್ಟಿಯಾಗಿ ನಿಲ್ಲಬೇಕಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿಗಳೊಂದಿಗೆ ನಾವು ಸದಾ ಬೆಂಬಲವಾಗಿರುತ್ತವೆ ಎಂಬ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.


ನಿರ್ದೇಶಕರಾದ ಬಿ. ಸೋಮಶೇಖರ ಶೆಟ್ಟಿ, ಪ್ರಮೋದ್ ಕುಮಾರ್ ಬಿ., ಅಧ್ಯಕ್ಷ ಡಾ.ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ಸಂಪತ್ ಕುಮಾರ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
.

Related posts

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!