September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

ನೆರಿಯ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೆರಿಯ ಗ್ರಾಮದ ನೆಕ್ಕರೆ ನಿವಾಸಿ ಬೋಬನ್ ಎಂಬವರ ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು ನದಿಯ ಪರಂಬೋಕು ಜಾಗದಲ್ಲಿ ಮುಂಡಾಜೆ ನಿವಾಸಿ ಜಾನ್ ಎಂಬವರ ಮಗ ಪವನ್ ಎಂಬಾತ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆ.18 ಕ್ಕೆ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಸುಧಾ ನೇತೃತ್ವದಲ್ಲಿ ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಭೂಮಾಫನ ಹಾಗೂ ಧರ್ಮಸ್ಥಳ ಪೊಲೀಸರ ಸರಕಾರದಲ್ಲಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಕಲ್ಲು ಗಣಿಗಾರಿಕೆಗೆ ಉಪಯೋಗಿಸುತ್ತಿದ್ದ ಎರಡು ಹಿಟಾಚಿ , ಒಂದು ಟಿಪ್ಪರ್ , ಒಂದು ಟಾಕ್ಟರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya
error: Content is protected !!