September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯು ಆ. 19 ರಂದು ಜರಗಿತು. ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್. ಕಾಕತ್ಕರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿದ್ಯಾ ಶ್ರೀನಿವಾಸ ಗೌಡ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರವೀಕ್ಷಣಾಧಿಕಾರಿ ಸುಜಯ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಖಿಲ್ ಕುಮಾರ್, ಇಂಡಿಯನ್ ಕರಾಟೆ ಅಸೋಸಿಯೇಷನ್ ತೀರ್ಪುಗಾರರಾದ ಅಶೋಕ್ ಆಚಾರ್ಯ, ಬೆಳಾಲು ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಧರ್ ಉಪಸ್ಥಿತರಿದ್ದರು.

52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಕು‌. ಜಾಹ್ನವಿ ಪ್ರಥಮ ಸ್ಥಾನ ಗಳಿಸಿ ದ. ಕ. ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಕ್ರೀಡಾಕೂಟವನ್ನು ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ಸಂಘಟಿಸಿದರು.

ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕ ಕಿರಣ್ ವಂದಿಸಿದರು. ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ವೆಬ್ ಟೆಕ್ ಫುಲ್ ಸ್ಟ್ಯಾಕ್ ಫಾಸ್ಟ್ ಟ್ರ್ಯಾಕ್” ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya
error: Content is protected !!