23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅoಗವಾಗಿ ಬೆಳ್ತಂಗಡಿ ವಲಯದ ಹಿರಿಯ ಛಾಯಾಗ್ರಹಕರಾದ ಕುಶಾಲಪ್ಪ ರೈ ಬಿoಬ ಸ್ಟುಡಿಯೋ ಪದ್ಮುoಜ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆ. 19 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ವಹಿಸಿದ್ದರು.

ವೇದಿಕೆಯಲ್ಲಿ ನೂತನ ಅಧ್ಯಕ್ಷ ರವಿ ಪೂಜಾರಿ ನಾರಾವಿ, ವಲಯದ ಜೊತೆ ಕಾರ್ಯದರ್ಶಿ ಶಿವಪ್ರಸಾದ್ ಉಜಿರೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ವಲಯದ ಸ್ಥಾಪಕಾ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.

ವಿಶ್ವ ಛಾಯಾಗ್ರಹಣ ದಿನಾಚರಣೆ ಬಗ್ಗೆ ವಲಯದ ಮಾಜಿ ಅಧ್ಯಕ್ಷ ಕೆ. ವಸಂತ್ ಶರ್ಮ ಮಾತನಾಡಿದರು. ಸನ್ಮಾನಿತರಾದ ಕುಶಾಲಪ್ಪ ರೈ ಪದ್ಮುಂಜ ಇವರು ಸಂಘಟನೆಯಲ್ಲಿ ನೀಡಿದ ಸಹಕಾರ ಹಿಂದೆ ಛಾಯಾಗ್ರಹಣ ಮಾಡುವ ಸಂದರ್ಭದಲ್ಲಿ ತೊಂದರೆಗಳನ್ನು ಅನುಭವಿಸಿದ ವಿಚಾರಗಳನ್ನು ಪಾಲಾಕ್ಷ ಪಿ ಸುವರ್ಣ ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆಗೈದರು. ಸಿಲ್ವಿಯಾ ಬೆಳ್ತಂಗಡಿ ಸ್ವಾಗತಿಸಿ , ನೂತನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ ಧನ್ಯವಾದವಿತ್ತರು.

Related posts

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya
error: Content is protected !!