25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ : “ಸಮ್ಯಕ್ ಭಾಷಾ ಸಂಸ್ಕೃತ ಭಾಷಾ, ಎಲ್ಲಾ ಭಾಷೆಗಳೂ ಸಂಸ್ಕೃತಮಯವಾಗಿದೆ. ಸಂಸ್ಕೃತ ಇರದ ಕ್ಷೇತ್ರವಿಲ್ಲ” ಎಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ. ಪ್ರಸನ್ನ ಕುಮಾರ್ ಐತಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಸಂಸ್ಕೃತ ಜಯ ಘೋಷಣೆಗಳೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಮೂಹ ಗಾಯನ ಹಾಗೂ ವಿಶ್ವ ಸಂಸ್ಕೃತ ದಿನದ ಮಹತ್ವದ ಕುರಿತು ಭಾಷಣ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಶಶಾಂಕ್ ಮತ್ತು ಸಹನ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಜನಾ ವಾಲ್ತಾಜೆ ಸ್ವಾಗತಿಸಿ, ವಿದ್ಯಾರ್ಥಿ ಕ್ರಿಸ್ಟಿ ವಂದಿಸಿದರು.

Related posts

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!