22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು.

ಇದರ ಅಧ್ಯಕ್ಷ ಸ್ಥಾನವನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ವಹಿಸಿದ್ದರು. ಭರತ್ ಕುಮಾರ್ ಜೈನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ವೇದಿಕೆಯಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ. ಕೆ, ಮರೋಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಶಿವಲಿಂಗಪ್ಪ ಗಾಣಿಗ, ಮರೋಡಿ ಎ ಒಕ್ಕೂಟದ ಅಧ್ಯಕ್ಷ ರಾಜು ಪೂಜಾರಿ, ಬಿ ಒಕ್ಕೂಟದ ಅಧ್ಯಕ್ಷ ರಾಜು ಪೂಜಾರಿ, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಮರೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ್ ಸಾಲ್ಯಾನ್ , ಮರೋಡಿ ವಿಭಾಗದ ಸೇವಾ ಪ್ರತಿನಿಧಿಗಳು ಮರೋಡಿ ಎ ಮತ್ತು ಬಿ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು, ಮರೋಡಿ ಗ್ರಾಮದ ಮಾಜಿ ಪಂಚಾಯತ್ ಸದಸ್ಯರುಗಳು, ಕ್ರೀಡಾಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಶಶಿಕಲಾ ಸ್ವಾಗತಿಸಿ, ನಾರಾವಿ ವಲಯದ ಮಾಜಿ ವಲಯಾಧ್ಯಕ್ಷ ಯಶೋಧರ ಬಂಗೇರ ನಿರೂಪಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
error: Content is protected !!