ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.04 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ 48-2025 ಕಲಂ 309(4)ಬಿ ಎನ್ ಎಸ್ ಅಡಿ ಪ್ರಕರಣ ದಾಖಲಾಗಿರುತ್ತದೆ.

ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿರುತ್ತದೆ.

ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪತ್ತೆಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!