July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ .ಟ್ರಸ್ಟ್ ಗುರುವಾಯನಕೆರೆ, ಅಖಿಲ ಭಾರತ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ರೋಟರಿ ಕ್ಲಬ್ ಫಲ್ಗುಣಿ ಸಿದ್ದಕಟ್ಟೆ, ಲಯನ್ಸ್ ಕ್ಲಬ್ ವೇಣೂರು ಮತ್ತು ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ಶಾಲಾ ಉಪಪ್ರಾಂಶುಪಾಲ ವೆಂಕಟೇಶ್ ಎಸ್. ತುಳುಪುಲೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದುಶ್ಚಟಗಳ ದುರಭ್ಯಾಸಗಳ ಮುಂದಿನ ವಿದ್ಯಾರ್ಥಿ ಜೀವನದಲ್ಲಿ ಬರುವ ಎಡವು ತೊಡಕುಗಳ ಬಗ್ಗೆ ಮನಮುಟ್ಟುವಂತೆ ಅರಿವು ಮೂಡಿಸಿದರು.

ಸಮಾರಂಭದ ಉದ್ಘಾಟನೆಯನ್ನು ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಪ್ರಾಸ್ತವಿಕವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಲಯ ಅಧ್ಯಕ್ಷ ಗಿರೀಶ್ ಕೆ. ಎಸ್. ವೇಣೂರು ಒಕ್ಕೂಟದ ಅಧ್ಯಕ್ಷ ಸುಚಿತ್ರ ಹೆಗ್ಡೆ, ಲಯನ್ಸ್ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಸಿದ್ದಕಟ್ಟೆ ರೋಟರಿ ಕ್ಲಬ್ ಕಾರ್ಯದರ್ಶಿ ಟೀನಾ ಡಿಕೊ, ಯೋಜನೆಯ ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಲೆವಿನಶ್ರೀ ನಿರೂಪಿಸಿ, ರವೀಂದ್ರ ಸ್ವಾಗತಿಸಿ, ಮೇಲ್ವಿಚಾರಕಿ ಶಾಲಿನಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!