September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಬೆಂಗಳೂರಿನ ಭಾರತ್ ಇನ್ಸಿಟ್ಯೂಟ್ ಆಫ್ ಸ್ಕೂಲ್ ಎಜುಕೇಶನ್ ನೊಂದಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು ಆ.೧೯ ರಂದು ಅಧಿಕೃತ ಕರಾರು ಮಾಡಿಕೊಂಡಿದ್ದು, ಕಾಲೇಜಿಗೆ ಅಧಿಕೃತ ಮಾನ್ಯತೆ ದೊರಕಿದೆ.


ಇದರಿಂದ ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಖಾಸಗಿ ಮತ್ತು ನೇರ ಪರೀಕ್ಷಾ ಕೇಂದ್ರವಾಗಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯುವ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫೈಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಹಾಗೂ ಮರು ಪರೀಕ್ಷೆ ಬರೆಯುವ, ಅರ್ಧದಲ್ಲಿ ಬಿಟ್ಟ ವಿದ್ಯಾರ್ಥಿಗಳಿಗೆ, ಫೈಲ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅವಕಾಶಗಳು ಸಿಕ್ಕಿವೆ. ಇದೀಗ ಅನುಗ್ರಹ ಟ್ರೆöÊನಿಂಗ್ ಕಾಲೇಜಿನಲ್ಲಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

ಸಂಸ್ಥೆಯ ಮುಖ್ಯಸ್ಥ ಎಂ ಜಿ ತಲ್ಹತ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಮುಹಮ್ಮದ್ ತೌಸೀಫ್ ಮತ್ತು ಅಬ್ದುಲ್ ಖಾದರ್ ಇದು ಬೆಳ್ತಂಗಡಿ ಹಾಗೂ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೊಸ ಚರಿತ್ರೆಯ ಆರಂಭ. ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್.ಎಸ್.ಎಲ್.ಸಿ, ಪಿಯುಸಿ ಪೂರೈಸಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನಮ್ಮ ಸಂಸ್ಥೆ ಎಲ್ಲಾ ರೀತಿಯ ನೆರವು ನೀಡಲು ಸಜ್ಜಾಗಿದೆ. ಈ ಮೂಲಕ, ಶಿಕ್ಷಣದಲ್ಲಿ ಹಿಂದೆ ಬಿದ್ದ ವಿದ್ಯಾರ್ಥಿಗಳು ಮತ್ತೆ ತಮ್ಮ ಜೀವನವನ್ನು ಮರು ಕಟ್ಟಿಕೊಳ್ಳುವ ಅಪೂರ್ವ ಅವಕಾಶ ದೊರೆತಿದೆ ಎಂದಿದ್ದಾರೆ.

Related posts

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya
error: Content is protected !!