September 6, 2026
ತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು.ನೋಟಿಸ್ ಬೆನ್ನಲ್ಲೇ ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗದೆ ಇದ್ದಲ್ಲಿ BNS 35(6) ಅಡಿಯಲ್ಲಿ ಬಂಧಿಸಲಾಗುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.
ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.

Related posts

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya
error: Content is protected !!