September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಉಜಿರೆ: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೋಲೀಸರು ಇಂದು ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು
ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಆ.21
ರಂದು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡು ತೆರಳಿದ್ದಾರೆ.

ಆ.21 ರಂದು ಉಡುಪಿ ಜಿಲ್ಲಾ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ ಪೊಲೀಸ್ ವಾಹನದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಆಗಮಿಸಿದ್ದಾರೆ. ಈ ಮಧ್ಯೆ ವಾದ- ವಿವಾದಗಳು ನಡೆದು ತಿಮರೋಡಿಯವರನ್ನು ವಶಕ್ಕೆ ಪಡೆಯಲಾಗಿದೆ.
ಆ.16 ರಂದು ಸಾಮಾಜಿಕ ಜಾಲ ತಾಣದಲ್ಲಿ. ಮಹೇಶ ಶೆಟ್ಟಿ ತಿಮರೋಡಿಯವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ, ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ಕರೆದೊಯ್ದುದ್ದಾರೆ.

Related posts

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya
error: Content is protected !!