37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಆ.21ರಂದು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ರಸ್ತೆಗಳ ಅಭಿವೃದ್ಧಿಗೆ ಆದ್ಯತೆಯನ್ನು ನೀಡಿ. ಕುಮೇರು ರಸ್ತೆ ಮೇಲೆ ಬಂಡೆ ಕಲ್ಲು ಬಿದ್ದು ಸಂಚಾರ ಕಷ್ಟಸಾಧ್ಯವಾಗಿದೆ. ಕುಮೇರು ವಾರ್ಡ್ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗಳ ಬದಲಾವಣೆ ಆಗದೆ ಹಲವು ವರ್ಷಗಳಾಗಿದ್ದು, ತಂತಿಗಳು ಜೋತು ಬಿದ್ದಿರುತ್ತದೆ. ಮಳೆಗಾಲದಲ್ಲಿ ಮರದ ಗೆಲ್ಲುಗಳು ತಂತಿ ಮೇಲೆ ಬೀಳುತ್ತಿರುವುದರಿಂದ ವಿದ್ಯುತ್ ಸಮಸ್ಯೆ ಕಾಡುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ರೋಹಿಣಿ, ಸದಸ್ಯರಾದ ಕೆ.ಯು. ಮಹಮ್ಮದ್, ಡಿ. ದಿನೇಶ್ ಗೌಡ, ಪವಿತ್ರಾ, ಅರುಣಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ರಶ್ಮಿ ಸ್ವಾಗತಿಸಿ, ವಂದಿಸಿದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.

Related posts

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya
error: Content is protected !!