Uncategorizedವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

ಕನ್ಯಾಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ.೩೩,೩೩೩/- ದೇಣಿಗೆಯನ್ನು ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಸಂಘಟನಾ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಎಂ. ರವರಿಗೆ ರೂ.೧೦ ಸಾವಿರ ಚೆಕ್‌ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಬೊಳ್ಮ, ಉಪಾಧ್ಯಕ್ಷ ಯತೀಶ್ ಸುವರ್ಣ, ಸಂಯೋಜಕ ರಾಜೇಂದ್ರ ಅಜ್ರಿ, ಉದ್ಘಾಟಕ ದೇವದಾಸ ಎಲ್. ಶೆಟ್ಟಿ ಬದ್ಯಾರು, ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿಮಲಾ ಪರಮೇಶ್ವರ, ಶಿವ ಪಾರ್ವತಿ ಕಲ್ಯಾಣ ಮಂಟಪ ಮಾಲಕ ಗಿರೀಶ್ ಕುದ್ರೆಂತ್ತಾಯ, ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ದೇವಸ್ಯ ಟಿ, ಬೃಂದಾವನ ಮನೆ ಕನ್ಯಾಡಿ II ಶ್ರೀಮತಿ ಪವಿತ್ರ ಸುಕುಮಾರ ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಸದಸ್ಯರಾದ ವಸಂತ ನಾಯ್ಕ, ಶ್ರೀಮತಿ ರೇವತಿ, ಕೆ. ನಂದ ಅಧ್ಯಕ್ಷರು ಎಸ್‌ಡಿಎಂಸಿ, ಕನ್ಯಾಡಿ-II ಪ್ರ.ಮು.ಶಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!