ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ವಿರುದ್ದ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಿಂದ ಮಹೇಶ್ ಶೆಟ್ಟಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸರು ಆ.21 ರಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ ಬಳಿಕ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಲಯ ನ್ಯಾಯಾಂಗ ಬಂಧನ ನೀಡಿದೆ.
ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿಯನ್ನು ವಿಚಾರಣೆ ನಡೆಸಿ ಬಂಧಿಸಿ, ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಅರ್ಜಿ ವಜಾಗೊಳಿಸಿ, ನ್ಯಾಯಾಂಗ ಬಂಧನ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಮುಂದಿನ ವಿಚಾರಣೆ ಆ.23ರಂದು ನಡೆಯಲಿದೆ.











