September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಠಾಣೆ ಪರಿಸರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

Related posts

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!