24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ವಿರುದ್ದ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಿಂದ ಮಹೇಶ್ ಶೆಟ್ಟಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸರು ಆ.21 ರಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ ಬಳಿಕ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಲಯ ನ್ಯಾಯಾಂಗ ಬಂಧನ ನೀಡಿದೆ.

ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಿಂದ ಮಹೇಶ್‌ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದು ಉಡುಪಿ ಎಸ್ಪಿ ಹರಿರಾಂ ಶಂಕರ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿಯನ್ನು ವಿಚಾರಣೆ ನಡೆಸಿ ಬಂಧಿಸಿ, ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಅರ್ಜಿ ವಜಾಗೊಳಿಸಿ, ನ್ಯಾಯಾಂಗ ಬಂಧನ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಮುಂದಿನ ವಿಚಾರಣೆ ಆ.23ರಂದು ನಡೆಯಲಿದೆ.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya
error: Content is protected !!