25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್.ಎಂಬ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ಪಿರ್ಯಾದಿದಾರರಾದ ಬೆಳ್ತಂಗಡಿ ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ (44) ಎಂಬವರು ನೀಡಿದ ದೂರಿನಂತೆ ಆರೋಪಿ ಮಂಜುನಾಥ ಎನ್. ಎಂಬ ವಕೀಲರು ಪ್ರಸ್ತುತ ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಮೃತದೇಹಗಳ ಉತ್ಪನನ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ 30.07.2025 ರಂದು ತಾನು ಓರ್ವ ವಕೀಲನಾಗಿ, ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya
error: Content is protected !!