37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಬೆಳ್ತಂಗಡಿ: ಮೂಡುಬಿದ್ರೆಯ ಎಕ್ಸೆಲೆಂಟ್ ಪ.ಪೂ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಮಂಗಳೂರು ಶ್ರೀ ಶಾರದಾ ಪ.ಪೂ ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪ.ಪೂ ಕಾಲೇಜಿನ ಶ್ರೀನಿವಾಸ ಮಧ್ಯಸ್ಥ , ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅಂಬರೀಷ ಚಿಪ್ಲೂಣಕರ್ , ಸುರತ್ಕಲ್ ಗೋವಿಂದದಾಸ ಪ.ಪೂ ಕಾಲೇಜಿನ ಪೈಕ ವೆಂಕಟರಮಣ ಭಟ್ ಇವರು ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜಿನ ಡಾ. ಸುರೇಖಾ ತಂತ್ರಿ , ಜೊತೆ ಕಾರ್ಯದರ್ಶಿಗಳಾಗಿ ಮಂಗಳೂರು ಮ್ಯಾಪ್ಸ್ ಪ.ಪೂ ಕಾಲೇಜಿನ ಶೈಲಜಾ ಹೆಚ್. ಎಸ್. , ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅನಂತ ಭಟ್ , ಕಲ್ಲಡ್ಕದ ಶ್ರೀರಾಮ ಪ.ಪೂ ಕಾಲೇಜಿನ ಮಹೇಂದ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ಮೂಡುಬಿದ್ರೆಯ ಎಕ್ಸಲೆಂಟ್ ಪ.ಪೂ ಕಾಲೇಜಿನ ತೇಜಸ್ವಿ ಭಟ್ ಇವರು ಆಯ್ಕೆಯಾಗಿದ್ದಾರೆ.

ಖಜಾಂಚಿಯಾಗಿ ಮಂಗಳೂರಿನ ಡಾ. ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ರವಿಶಂಕರ ಹೆಗಡೆ , ರಾಜ್ಯಮಟ್ಟದ ಸಂಘಕ್ಕೆ ಜಿಲ್ಲಾ ಸಂವಹನ ಪ್ರತಿನಿಧಿಯಾಗಿ ಪುತ್ತೂರಿನ ಸರಕಾರಿ ಪ.ಪೂ ಕಾಲೇಜಿನ ಪ್ರಕಾಶ್ ವಿ.ಕೆ ಆಯ್ಕೆಯಾಗಿದ್ದಾರೆ.

ಸಲಹಾ ಸಮಿತಿಯ ಸದಸ್ಯರಾಗಿ ಮಂಗಳೂರು ಬೆಸೆಂಟ್ ಪ.ಪೂ ಕಾಲೇಜಿನ ಅಜಿತಾ , ಮಂಗಳೂರು ಕೆನರಾ ಪ.ಪೂ ಕಾಲೇಜಿನ ಡಾ. ಮಧುಕೇಶ್ವರ ಶಾಸ್ತ್ರಿ , ಮೂಡಬಿದ್ರೆ ಜೈನ್ ಪ.ಪೂ ಕಾಲೇಜಿನ ರಾಮಚಂದ್ರ ಭಟ್ , ಅಳಿಕೆ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ವೆಂಕಟಕೃಷ್ಣ ಶರ್ಮಾ ಇವರು ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
error: Content is protected !!