September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

ಮಡಂತ್ಯಾರು: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು.

ಮಡಂತ್ಯಾರು ಸೇಕ್ರೆಡ್ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಪಡ್ಪು ಪಂದ್ಯಾಟವನ್ನು ಉದ್ಘಾಟಿಸಿದರು. ಪುಟ್ಬಾಲ್ ಆಟ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವುದರ ಜೊತೆಗೆ ಶಾರೀರಿಕ ಹತೋಟಿಯನ್ನು ನೀಡುತ್ತದೆ. ಪುಟ್ಬಾಲ್ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದ ಕ್ರೀಡೆಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ.ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು.ತಾಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪಟುಗಳು ಸಾಧನೆ ಮಾಡುವಂತಾಗಲೆಂದು ಅವರು ಶುಭಹಾರೈಸಿದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಡಾ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಸ್ವಾಗತಿಸಿ, ಉಪನ್ಯಾಸಕರಾದ ವಸಂತ್ ಶೆಟ್ಟಿ ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.


ಫಲಿತಾಂಶ:
ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಪ್ರಥಮ ಸ್ಥಾನ ಹಾಗೂ ಎಸ್.ಡಿ.ಎಂ ಪಿಯು
ಕಾಲೇಜು ಉಜಿರೆ ದ್ವಿತೀಯ ಸ್ಥಾನ ಪಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಬಹುಮಾನ ವಿತರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಸಂಜಿತ್ ಕುಮಾರ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.

Related posts

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya
error: Content is protected !!