ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಠಾಣೆಗೆ ಕರೆದೊಯುತ್ತಿದ್ದ ವೇಳೆ ಕಾರ್ಕಳದ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಆ.21 ರಂದು ಸಂಭವಿಸಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸೃಜನ್, ಹಿತೇಶ್ ಶೆಟ್ಟಿ, ಸುಜಿತ್ ಎಂದು ಗುರುತಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ರಾಜೀವ್ ಕುಲಾಲ್ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲೇ ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಅವರ ಹಿಂದೆ ಬರುತ್ತಿದ್ದ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್ ವಾಹನಕ್ಕೆ ಗುದ್ದಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!