September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು, ಈ ವೇಳೆಗೆ ಅದೇ ದಿನ ಸಂಜೆ ಮಂಗಳೂರು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ನಿರೀಕ್ಷಣಾ ಜಾಮೀನು ನೀಡುವ ವೇಳೆ ಕೋರ್ಟ್ ಹಲವು ಷರತ್ತು ವಿಧಿಸಿದ್ದ. ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್ ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!