25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

ಬೆಳ್ತಂಗಡಿ: ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್ ವೃತ್ತ ಮತ್ತು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಮತ್ತು ಈದ್ ಮೀಲಾದ್ ಕಾರ್ಯಕ್ರಮದ ಶಾಂತಿಸಭೆಯು ಬೆಳ್ತಂಗಡಿಯ ಮಂಜುನಾಥ ಸಭಾಭವನದಲ್ಲಿ ಆ.21 ರಂದು ನಡೆಸಲಾಯಿತು.

ಸಭೆಯಲ್ಲಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅಧ್ಯಕ್ಷತೆ ವಹಿಸಿದ್ದರು. ಇನ್ಸ್ ಪೆಕ್ಟರ್ ಸುಬ್ಬಾಪುರ ಮಠ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ಆಯೋಜಕರಿಗೆ ಗಣೇಶೋತ್ಸವದ ಮೆರವಣಿಗೆ ಹಾಗೂ ಈದ್ ಮೀಲಾದ್ ಜಾಥಾ ಮತ್ತು ಕಾರ್ಯಕ್ರಮಕ್ಕೆ ಸಕ್ಷಮ ಪ್ರಾಧಿಕಾರ ಮತ್ತು ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು ನಿಯಮಾನುಸಾರ ಯಾವುದೇ ಡಿ ಜೆ ಬಳಸದೇ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಹಾಗೂ ಯಾವುದೇ ಅನಗತ್ಯ ಘೋಷಣೆಯನ್ನು ಕೂಗದೇ ಕ್ಲಪ್ತ ಸಮಯಕ್ಕೆ ಕಾರ್ಯಕ್ರಮ ಮುಗಿಸುವುದು ಆಯೋಜಕರ ಜವಾಬ್ದಾರಿ ಹಾಗೂ ಇಲಾಖಾ ನಿಯಮ ಮೀರಿ ಕಾರ್ಯಕ್ರಮ ಹಾಗೂ ಡಿ ಜೆ ಬಳಸಿದಲ್ಲಿ ಆಯೋಜಕರ ಹಾಗೂ ಸಂಬಂಧಪಟ್ಟವರ ಮೇಲೆ ಪೋಲಿಸ್ ಇಲಾಖೆಯ ಭಾರತ ದಂಡ ಸಂಹಿತೆಯ ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಶಾಂತಿಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಕೆಲವು ಗಣೇಶೋತ್ಸವ ಮತ್ತು ಈದ್ ಮೀಲಾದ್ ಕಾರ್ಯಕ್ರಮದ ಸಮಿತಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ನಮ್ಮ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುವ ಅಥವಾ ಶಾಂತಿಭಂಗದಂತಹ ಯಾವುದೇ ಚಟುವಟಿಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಹಾಗೂ ಇಲಾಖೆಯ ಕೆಲವು ನಿಯಮಗಳಿಂದ ರಿಯಾಯಿತಿ ನೀಡಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಿದರು. ಹಾಗೂ ಇಂತಹ ದೊಡ್ಡ ಮಟ್ಟದ ಶಾಂತಿ ಸಭೆ ಆಯೋಜನೆ ಮಾಡಿದ ಇಲಾಖೆಗೆ ಅಭಿನಂದನೆ ಸಲ್ಲಿಸಲಾಯಿತು.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya
error: Content is protected !!