
ನಯನಾಡು : ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ -ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ನಯನಾಡು ಸರಕಾರಿ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಸತತ 8 ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಪ್ರವೇಶ ಪಡೆದಿದೆ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿದೆ.







