37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು ಮತ್ತೆ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಾಗೇಶ್ ಅವರು ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರುಬಳಿಕ ನ್ಯಾಯಾಧೀಶರು ತಿಮರೋಡಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಎರಡು ಗಂಟೆ ಕಸ್ಟಡಿಗೆ ನೀಡಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದರು.

ಅದರಂತೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ವಿಚಾರಣೆಗಾಗಿ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಬಳಿಕ ಮತ್ತೆ ಕೋಟಿ೯ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿದೆ.

Related posts

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!